Sunday, March 23, 2025
Homeಮುಂಬೈ6 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೈದ ಬಾಲಿವುಡ್‌ ನಟಿ ಮಲೈಕಾ ಅರೋರ ತಂದೆ | ಆಗಿದ್ದೇನು?

6 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೈದ ಬಾಲಿವುಡ್‌ ನಟಿ ಮಲೈಕಾ ಅರೋರ ತಂದೆ | ಆಗಿದ್ದೇನು?

ಮುಂಬೈ: ಖ್ಯಾತ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆರನೇ ಮಹಡಿಯಿಂದ ಜಿಗಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮುಂಬೈನಲ್ಲಿರುವ ಮನೆಯ ಟೆರೇಸ್‌ ಮೇಲೆ ತೆರಳಿರುವ ಮಲೈಕಾ ಅರೋರಾ ಅವರ ತಂದೆ ಆರನೇ ಮಹಡಿಯಿಂದ ಜಿಗಿದಿದ್ದಾರೆ. ಘಟನಾ ಸ್ಥಳಕ್ಕೆ ಮುಂಬೈನ ಕ್ರೈಮ್‌ ಬ್ರಾಂಚ್‌ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.
ಮುಂಬೈನ ಬಾಂದ್ರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಅನಿಲ್ ಅರೋರಾ ತಮ್ಮ 6 ಅಂತಸ್ತಿನ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಲೈಕಾ ಅರೋರ ತಂದೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅನಿಲ್ ಅರೋರಾ ಅವರು ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್ ಡಿವೋರ್ಸ್ ಪಡೆದಿದ್ದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ಆರೋರಾ ಆತ್ಮಹತ್ಯೆಗೈದಿದ್ದಾರೆ.

RELATED ARTICLES
- Advertisment -
Google search engine

Most Popular