ಮಹಾರಾಷ್ಟ್ರ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಖುಲಾಸೆಗೊಳಿಸಲಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಮಾಲೇಗಾಂವ್ ನಗರದಲ್ಲಿ 17 ವರ್ಷಗಳ ಹಿಂದೆ ನಡೆದ, ಬಾಂಬ್ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಗುರುವಾರ ಪ್ರಕರಣದ ತೀರ್ಪು ಪ್ರಕಟಿಸಿದೆ.
ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (55) ಮತ್ತು ಸೇವೆ ಸಲ್ಲಿಸುತ್ತಿರುವ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ (53) ಸೇರಿದಂತೆ ಹಲವು ಆರೋಪಿಗಳ ಹೆಸರು ಈ ಪ್ರಕರಣದಲ್ಲಿತ್ತು. ಸೆಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಈ ಪ್ರಕರಣ ಸಂಭವಿಸಿತ್ತು.