
ಬೆಂಗಳೂರು: ದಿನಾಂಕ 29.06.2026 ರಂದು ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ನೆರವೇರಿತು.

ಈ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಧರ್ಮಪತ್ನಿ ಶ್ರೀಮತಿ ರಾಧಾ ಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯರಾದ ಶ್ರೀ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭಾಶಯಗಳನ್ನು ಕೋರಿದರು.

