ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ : ಯಶ್ ಪಾಲ್ ಸುವರ್ಣ

0
8

ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಮೇರೆಗೆ ಮಂಗಳವಾರ ಕಾಮಗಾರಿ ಪ್ರಾರಂಭಗೊಂಡಿದೆ.

ಬಂದರು ಪ್ರವೇಶ ದ್ವಾರ ಹಾಗೂ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪೂರಕವಾಗಿ ಗೇಟ್ ಅಗಲವನ್ನು 24 ಮೀಟರ್ ಮರುವಿನ್ಯಾಸ ಮಾಡಲಾಗಿದ್ದು

ರಾಷ್ಟ್ರೀಯ ಹೆದ್ದಾರಿ ಮಲ್ಪೆ ಬಂದರು ಸಂಪರ್ಕಿಸುವ ಭಾಗದಲ್ಲಿ ಕಿರು ಸೇತುವೆ ನಿರ್ಮಾಣವನ್ನು ವಿಸ್ತರಿಸಿ, ಗೇಟ್ ಹಾಗೂ ಕಿರು ಸೇತುವೆ ಕಾಮಗಾರಿಯನ್ನು ಏಕಕಾಲದಲ್ಲಿ ಆರಂಭಿಸಿ ಮೀನುಗಾರಿಕಾ ರಜೆ ಹಿನ್ನೆಲೆಯಲ್ಲಿ ಬಂದರಿನ ಚಟುವಟಿಕೆಗೆ ಸಮಸ್ಯೆಯಾಗದಂತೆ ಬಂದರು ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರಕವಾಗಿ ಕೆಲಸ ಮಾಡುವಂತೆ ತಿಳಿಸಿದ್ದರು.

ಬಂದರು ಇಲಾಖೆಯ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಜಾಗವನ್ನು ತಕ್ಷಣ ತೆರವು ಮಾಡಿ ಕಾಮಗಾರಿಗೆ ಅನುವು ಮಾಡಿ, ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಕಂಬಗಳ ಸ್ಥಳಾಂತರ, ಬಂದರು ಪ್ರವೇಶ ಬದಲಿ ಮಾರ್ಗದ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ, ಸುಗಮ ವಾಹನ ಸಂಚಾರ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಮಲ್ಪೆ ಪೊಲೀಸ್ ಉಪ ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ ಆರಂಭಗೊಂಡಿದ್ದು, ಮಲ್ಪೆ ಮೀನುಗಾರಿಕಾ ಬಂದರಿನ ಹಳೆ ಪ್ರವೇಶ ದ್ವಾರವನ್ನು ತೆರವು ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಡಿ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕುಂದರ್, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್, ಸುಭಾಷ್ ಮೆಂಡನ್, ಪ್ರಕಾಶ ಬಂಗೇರ, ಕೃಷ್ಣ ಕೋಟ್ಯಾನ್, ಸುರೇಶ್ ಕುಂದರ್, ಮೀನುಗಾರಿಕೆ,ಬಂದರು ಇಲಾಖೆಯ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here