ಉಪ್ಪಿನಂಗಡಿ : ಮಾದಕ ವಸ್ತು ಸೇವಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಆತನಿಂದ 33 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ನಿವಾಸಿ ಮಹಮ್ಮದ್ ಶಾಫಿ (33) ಎಂದು ಗುರುತಿಸಲಾಗಿದೆ. ಕುಮಾರಧಾರ ನದಿಯ ಹಳೆ ಸೇತುವೆ ಸಮೀಪ ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ ತೊಂದರೆ ನೀಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಉಪ್ಪಿನಂಗಡಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು.
ಪರಿಶೀಲನೆ ವೇಳೆ ಆರೋಪಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದು ಕಂಡುಬಂದಿದ್ದು, ತಪಾಸಣೆ ನಡೆಸಿದಾಗ ಆತನ ಬಳಿ 33 ಗ್ರಾಂ ಗಾಂಜಾ ಪತ್ತೆಯಾಗಿದೆ. ಪೊಲೀಸರು ತಕ್ಷಣವೇ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

