ಚಿಕ್ಕಮಗಳೂರು: ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಾವಿನಹಳ್ಳಿ ಗ್ರಾಮದ ಮಂಜು ಎಂಬಾತ ಒಂಟಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಬೆಳಿಗ್ಗೆ ವಾಕಿಂಗ್ ಹೋಗುವ ಮಹಿಳೆಯರನ್ನು ಗುರಿಯಾಗಿಸಿ, ಈತ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈತನನ್ನು ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.
ಅಂಗನವಾಡಿ ಶಿಕ್ಷಕಿಯ ಜೊತೆ ಅಸಭ್ಯವಾಗಿ ವರ್ತಿಸಿ ತೋಟದಲ್ಲಿ ಅವಿತಿದ್ದ ಈತನನ್ನು ಪತ್ತೆಹಚ್ಚಿ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.