ಮಲ್ಪೆಯಲ್ಲಿ ವ್ಯಕ್ತಿಯ ಕೊಲೆ : ಮಲಗುತ್ತಿದ್ದ ಸ್ಥಳದಲ್ಲೇ ಮೃತದೇಹ ಪತ್ತೆ

0
113

ಉಡುಪಿ : ತಾಲೂಕಿನ ಮಲ್ಪೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಮೂಲತಃ ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ.

ಪರಮೇಶ್ ಅವರು ಮಲ್ಪೆ ಸುತ್ತಮುತ್ತ ಗುಜರಿ ಆಯ್ದು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಪ್ರತಿದಿನ ಅವರು ಮಲಗುತ್ತಿದ್ದ ಸ್ಥಳದಲ್ಲೇ ಮಂಗಳವಾರ ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಕೊಲೆಯ ಹಿಂದಿನ ಕಾರಣ ಹಾಗೂ ಆರೋಪಿಗಳ ಬಗ್ಗೆ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.