Wednesday, October 9, 2024
Homeರಾಜ್ಯಹುಡುಗಿ ಕೊಡಿ ಸರ್…!‌ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಯುವಕ!

ಹುಡುಗಿ ಕೊಡಿ ಸರ್…!‌ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಯುವಕ!

ಕನಕಗಿರಿ: ರೈತರ ಮಕ್ಕಳಿಗೆ ಹುಡುಗಿ ಸಿಗುತ್ತಿಲ್ಲ, ಹುಡುಗಿ ಕೊಡಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗೆ ಯುವಕನೊಬ್ಬ ಮನವಿ ಮಾಡಿದ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಸಂಗಪ್ಪ ಎಂಬವರು ಜಿಲ್ಲಾಧಿಕಾರಿ ನಳಿನ್‌ ಅತುಲ್‌ಗೆ ಈ ಬಗ್ಗೆ ಅರ್ಜಿ ನೀಡಿದ್ದಾರೆ.
ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಹುಡುಗಿ ಹುಡುಕುತ್ತಿದ್ದೇನೆ. ಆದರೆ ಇಲ್ಲಿವರೆಗೆ ಯಾವುದೇ ಹುಡುಗಿ ಮದುವೆ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಹೀಗಾಗಿ ಸರ್ಕಾರ ಈ ಬಗ್ಗೆ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ಮೂಲಕ ರೈತರ ಮಕ್ಕಳ ಬಾಳು ಬೆಳಗಲು ನೆರವಾಗಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಯುವಕನ ಮನವಿ ಕೇಳಿ ದಂಗಾದ ಜಿಲ್ಲಾಧಿಕಾರಿ, ಈ ಬಗ್ಗೆ ಪರಿಶೀಲಿಸ್ತೀವಿ ಎಂದಿದ್ದಾರೆ. ಅರ್ಜಿಯನ್ನೂ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular