ಟೆರೇಸ್​ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

0
58


ಉಡುಪಿ: ತೆಂಗಿನಕಾಯಿ ಕೀಳುವಾಗ ಟೆರೇಸ್​ನಿಂದ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ಸಂಭವಿಸಿದೆ.

ಶಾಂತಿನಗರ ನಿವಾಸಿ ಸದಾಶಿವ (59) ಮೃತಪಟ್ಟವರು. ಅಕ್ಟೋಬರ್​ 30ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಯ ಹತ್ತಿರವಿದ್ದ ತೆಂಗಿನ ಮರದಿಂದ ದೋಟಿಯ ಮೂಲಕ ತೆಂಗಿನಕಾಯಿ ಕೀಳಲು ಟೆರೇಸ್​ ಹತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನ. 2ರಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.