ಬೆಂಗಳೂರು : ಕೆಲಸದಿಂದ ತೆಗೆದು ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಮ್ಯಾನೇಜ್ ನನ್ನೇ ಕೊಲೆಗೈದಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪೈ.ಲಿ. ಕಂಪನಿಯಲ್ಲಿ ಘಟನೆ ನಡೆದಿದೆ. ರಾಹುಲ್ (38) ಕೊಲೆಯಾದ ಮ್ಯಾನೇಜರ್. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಹನುಮಂತನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

