ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಬುಧವಾರ ಉಚಿತ ಪುಸ್ತಕ ಮತ್ತು ಲೇಖನಿ ಸಾಮಾಗ್ರಿ ವಿತರಿಸಲಾಯಿತು.
ಗ್ರಾಮೀಣ ಮತ್ತು ನಗರದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಕೆಲವೊಂದು ಮೂಲಭೂತ ಸೌಕರ್ಯದ ಕೊರತೆ ಇದೆ. ಈ ಸಮಸ್ಯೆ ನಿವಾರಿಸಲು ಸರಕಾರ ಮತ್ತು ವಿವಿಧ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ವಿಜಯ ಫೆನಾರ್ಂಡಿಸ್ ಹೇಳಿದ್ದಾರೆ.
ಇಲ್ಲಿನ ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಸಕರ್ಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಥರ್ಿಗಳಿಗೆ ಮಂಗಳವಾರ ಉಚಿತ ಪುಸ್ತಕ ಮತ್ತು ಲೇಖನಿ ಸಾಮಾಗ್ರಿ ವಿತರಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶೈಲಜಾ ಗಣೇಶ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್ಬಿನ ಸದಸ್ಯರಾದ ಸೆಬೆಸ್ಟಿನ್ ಮಿನೇಜಸ್, ರಾಜೇಶ್ ಶೆಟ್ಟಿ ಕೊನೆರೊಟ್ಟು, ಶಶಿಧರ ಶೆಟ್ಟಿ ಕಲ್ಲಾಪು ಶುಭ ಹಾರೈಸಿದರು.
ಶಿಕ್ಷಕಿಯರಾದ ಭವಾನಿ ಮಹೇಶ್, ಪವಿತ್ರ ಜೈನ್, ಅಂಗನವಾಡಿ ಕಾರ್ಯಕರ್ತೆ ಹೇಮಲತಾ ಶೆಟ್ಟಿಗಾರ್, ಪ್ರಮುಖರಾದ ಸುರೇಶ್ ಸಾಲ್ಯಾನ್, ಸುಮಲತಾ, ಜಯಶ್ರೀ ದೇವರಾಜ್ ಮತ್ತಿತರರು ಇದ್ದರು.
ಮುಖ್ಯಶಿಕ್ಷಕಿ ವಿನಿತಾ ಅರ್ಕಳ ಸ್ವಾಗತಿಸಿ, ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ವಂದಿಸಿದರು.