ಮಂಡ್ಯ : ಕೌಟುಂಬಿಕ ಕಲಹದ ಬೆನ್ನಿನಲ್ಲಿ ದಂಪತಿ ಆತ್ಮಹತ್ಯೆ, ಮಗುವಿಗೆ ಹಾನಿ ಯತ್ನ

0
16

ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ದಂಪತಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ . ಆರ್. ಪೇಟೆ ಪಟ್ಟಣದಲ್ಲಿ ಸಂಭವಿಸಿದೆ. ಹೊಸಕೋಟೆ ಗ್ರಾಮದ ದರ್ಶನ್ ಹಾಗೂ ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು.

ದಂಪತಿ ಸುಮಾರು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಇವರಿಗೆ ಎರಡು ವರ್ಷದ ಮಗು ಇದ್ದು, K. R. Pet ಪಟ್ಟಣದ ಜಯನಗರ ಬಡಾವಣೆಯೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಭಾನುವಾರ ಬೆಳಿಗ್ಗೆ (ಮಾ.9) ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ತಮ್ಮ ಮಗುವಿನ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದಾರೆ ಈ ವೇಳೆ ಮಗು ಅಸ್ವಸ್ಥಗೊಂಡಿದ್ದು, ಬಳಿಕ ದಂಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಈ ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕೆ . ಆರ್. ಪೇಟೆ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here