Monday, March 17, 2025
Homeನಿಧನಮಂಡ್ಯ: ಕೌಟುಂಬಿಕ ಕಲಹಕ್ಕೆ ದಂಪತಿಗಳು ನೇಣಿಗೆ ಶರಣು

ಮಂಡ್ಯ: ಕೌಟುಂಬಿಕ ಕಲಹಕ್ಕೆ ದಂಪತಿಗಳು ನೇಣಿಗೆ ಶರಣು

ಮಂಡ್ಯ : ಕೌಟುಂಬಿಕ ಕಲಹದಿಂದ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಪ್ರಭಾವತಿ (45) ದಿಲೀಪ್ (45) ಮೃತ ದುರ್ದೈವಿ ದಂಪತಿಗಳು ಎಂದು ತಿಳಿದುಬಂದಿದೆ. ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಹಾಗಾಗಿ ಕಳೆದ ರಾತ್ರಿ ಪ್ರಭಾವತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಪತ್ನಿ ಸಾವಿನಿಂದ ನೊಂದು ಬೆಳಗ್ಗೆ ಪತಿ ದಿಲೀಪ್ ಕೂಡ ನೇಣಿಗೆ ಶರಣಾಗಿದ್ದಾರೆ. ಬಾಬುರಾಯನ ಕೊಪಲ್ಲು ಬಳಿ ಜಮೀನೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular