ಮಂಗಳೂರು : ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ನಿವಾಸಿ ಮುಹಮ್ಮದ್ ಸಿರಾಜ್ ಎಂಬಾತನ ವಿರುದ್ಧ ಅರಣ್ಯ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಾಗಿ ಲಾರಿಯೊಂದರಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳು ಸಾಗಾಟ ಮಾಡುತ್ತಿರುವ ಕುರಿತ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯ ಮೇರಗೆ ಸಿಬ್ಬಂದಿ ದಾಳಿ ಮಾಡಿ 6ಲಕ್ಷ ರೂ. ಮೌಲ್ಯದ ವಿವಿಧ ಜಾತಿಯ 26 ಮರದ ದಿಮ್ಮಿಗಳು, ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕ ಸಿರಾಜ್ ವಿರುದ್ಧ ಪ್ರಕರಣದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ್, ವಲಯ ಅರಣ್ಯ ಅಧಿಕಾರಿ(ಪ್ರಭಾರ) ಪ್ರಶಾಂತ್, ಉಪ ವಲಯ ಅರಣ್ಯ ಅಧಿಕಾರಿ ಶಿವಾನಂದ ಸದೇಪ ಮಾದರ, ಉಪ ವಲಯ ಅರಣ್ಯ ಅಧಿಕಾರಿ ವಿನಯ ಕುಮಾರ್, ವಾಹನ ಚಾಲಕರು ಜಯಪ್ರಕಾಶ್ ಕೆ, ಮತ್ತು ಜಯಪ್ರಕಾಶ್ ಭಾಗವಹಿಸಿದರು.
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಎಂ. ದಾಳಿ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಇವರು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.