Wednesday, January 15, 2025
HomeUncategorizedಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಸೇರಿ ಮೂವರು ಮಕ್ಕಳಿಗೆ ಗಾಯ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಸೇರಿ ಮೂವರು ಮಕ್ಕಳಿಗೆ ಗಾಯ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮಂಜನಾಡಿಯ ಖಂಡಿಕದಲ್ಲಿ ನಡೆದಿದೆ. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಂಡಿಕ ಪ್ರದೇಶದ ಮುತ್ತಲಿಬ್ ಎಂಬುವರ ಮನೆಯಲ್ಲಿ ಮಧ್ಯರಾತ್ರಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಚಾವಣಿ ಹಾರಿಹೋಗಿದೆ.

ತಾಯಿ ಮತ್ತು ಮೂವರು ಮಕ್ಕಳು ಮಲಗಿದ್ದ ಮಂಚ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular