Sunday, March 23, 2025
Homeಮಂಗಳೂರುಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು. ಈ ಸಂದರ್ಭದಲ್ಲಿ, ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸಲು ಬಂಟ್ಸ್ ಹಾಸ್ಟೆಲ್‌ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಗೆ ಬ್ರಿಜೇಶ್‌ ಚೌಟ ಅವರು ಆಗಮಿಸಿದರು. ನಾಮಪತ್ರವನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಲ್ಲೈಮುಗಿಲನ್‌ ಅವರು ಉಪಸ್ಥಿತರಿದ್ದರು. ಚೌಟ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಸಹ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular