ಮಂಗಳೂರು :ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ.
ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.