ಮಂಗಳೂರು: ದ.ಕ. ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಮಂಗಳೂರು ಮಹಾನಗರದ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆ ಹೊನಲು ಬೆಳಕಿನ 8ನೇ ವರ್ಷದ ಮಂಗಳೂರು ಕಂಬಳ ಡಿ.28ರಂದು ನಡೆಯಲಿದೆ.
ಅಂದು 8.15ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಡಿ. 29ರಂದು ಬೆಳಗ್ಗೆ 8 ಗಂಟೆಗೆ ಬಹುಮಾನ ವಿತರಣಾ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.