Tuesday, December 3, 2024
Homeಮಂಗಳೂರುಮಂಗಳೂರು : ಬೈಕ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಮಂಗಳೂರು : ಬೈಕ್‌ ಡಿಕ್ಕಿಯಾಗಿ ಪಾದಚಾರಿ ಮೃತ್ಯು

ಮಂಗಳೂರು: ನಗರದ ಹೊರವಲಯದ ಅಡ್ಯಾರುಕಟ್ಟೆ ಬಳಿ ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ಮೃತ ವ್ಯಕ್ತಿ ಅಬ್ದುಲ್ ಖಾದರ್ (60) ಎಂದು ತಿಳಿದು ಬಂದಿದೆ. ಅವರು ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನರಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular