ಮಂಗಳೂರು: ಪೊಲೀಸರ ವಿಶೇಷ ಕಾರ್ಯಾಚರಣೆ : 223 ಪ್ರಕರಣ ದಾಖಲು, 1,11,500 ರೂ. ದಂಡ

0
315

ಮಂಗಳೂರು:ಮೋಟಾರು ವಾಹನ ಕಾಯ್ದೆಯಡಿಯ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 223 ಪ್ರಕರಣ ದಾಖಲಿಸಿ, 1,11,500 ರೂ. ದಂಡ ವಿಧಿಸಿದ್ದಾರೆ.
ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರುಗಳಿಗೆ ಎಚ್ಚರಿಕೆ ನೀಡಲಾಗಿದೆ. ಪೊಲೀಸ್‌ ಆಯುಕ್ತರ ಕಚೇರಿಯ ಸಭಾಂಗಣ ಹಾಗೂ ಪೊಲೀಸ್ ಠಾಣೆಗಳು ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಜ್, ಸ್ಟಿಕ‌ರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಕೂಡ ನೀಡಲಾಗಿದೆ. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here