Sunday, July 21, 2024
Homeಮಂಗಳೂರುಇಂದು ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ

ಇಂದು ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಬಿಡುಗಡೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ  ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ಇದರ ದ್ವಿತೀಯ ಸಂಚಿಕೆಯ ಬಿಡುಗಡೆ ಸಮಾರಂಭ ಮೇ 30ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.  ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಬಿಡುಗಡೆ ನೆರವೇರಿಸಲಿದ್ದಾರೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular