Wednesday, February 19, 2025
Homeಮಂಗಳೂರುಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ ಯುವ ಪತ್ರಕರ್ತರಿಗೆ ಪುನಃಶ್ಚೇತನಾ ಶಿಬಿರ ಅವಶ್ಯ -ಸಂಜಯ ಪ್ರಭು

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ ಯುವ ಪತ್ರಕರ್ತರಿಗೆ ಪುನಃಶ್ಚೇತನಾ ಶಿಬಿರ ಅವಶ್ಯ -ಸಂಜಯ ಪ್ರಭು

ಮಂಗಳೂರು : ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಯುವ ಪತ್ರಕರ್ತರಿಗೆ ಆಗಾಗ ಪುನಃಶ್ಚೇತನಾ ಶಿಬಿರಗಳನ್ನು ಏರ್ಪಡಿಸಬೇಕು.
ಇದರಿಂದ ಹಿರಿಯ ಪತ್ರಕರ್ತರ ಸಾಧನೆ ಹಾಗೂ ಅನುಭವವನ್ನು ಯುವ ಪತ್ರಕರ್ತರು ಅರಿಯಲು ಸಾಧ್ಯ ಎಂದು ತರ್ಜನಿ ಕಮ್ಯುನಿಕೇಶನ್ಸ್ನ ವ್ಯವಸ್ಥಾಪಕ ನಿರ್ದೇಶಕ ಸಂಜಯ ಪ್ರಭು ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ” ಇ-ಪೇಪರ್‌ನ ತೃತೀಯ ಸಂಚಿಕೆಯನ್ನು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ” ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ದಾಖಲಿಸುವ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಒಂದು ಪ್ರಯತ್ನವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಪ್ರೆಸ್ ಕ್ಲಬ್‌ನ ಸ್ಥಾಪಕ ಅಧ್ಯಕ್ಷ ಆನಂದ ಶೆಟ್ಟಿ ಮಾತನಾಡಿ ” ಪತ್ರಕರ್ತರಿಗೆ ನೀಡಲಾಗುವ ಬಸ್ ಪಾಸ್ ಸಹಿತ ವಿವಿಧ ಸೌಲಭ್ಯಗಳ ಬಗ್ಗೆ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರದಲ್ಲಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಮಂಗಳೂರು  ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ. ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ಬಿ.ರವೀಂದ್ರ ಶೆಟ್ಟಿ, ಮಹಮ್ಮದ್ ಆರಿಫ್ ಪಡುಬಿದ್ರಿ, ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ಸ್ವಾಗತಿಸಿದರು.ಖಜಾಂಜಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular