ಸೆ.17ರಂದು ಮಂಗಳೂರು ವಿವಿ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆ

0
10

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2026-27ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಸೆ.17ರಂದು ನಡೆಯಲಿದೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿಯ ಆಡಳಿತ ಸೌಧದಲ್ಲಿರುವ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

2026-27ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿಶ್ವವಿದ್ಯಾನಿಲಯದ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ.