ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ ಸೆ.23ಕ್ಕೆ ಮರುನಿಗದಿ

0
10

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2026-27ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯನ್ನು ಸೆ.17ರ ಬದಲಾಗಿ ಸೆ.23ರಂದು ಮರುನಿಗದಿಪಡಿಸಲಾಗಿದೆ.

ಸೆ.23ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿಯ ಆಡಳಿತ ಸೌಧದಲ್ಲಿರುವ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.