ಮಂಗಳೂರು ವಿವಿ ಮಟ್ಟದ ಸಂಗೀತ ಸ್ಪರ್ಧೆ: ಉಡುಪಿ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೂರು ಬಹುಮಾನ

0
9

ಉಡುಪಿ : ಬ್ರಹ್ಮಾವರದ ಸಂತ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಂಗೀತ ಸ್ಪರ್ಧೆ–2026ರಲ್ಲಿ ಉಡುಪಿಯ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರು ಮೂರು ವಿಭಾಗಗಳಲ್ಲಿ ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ.

ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ತೃತೀಯ ಬಿಕಾಂ ವಿದ್ಯಾರ್ಥಿನಿ ಭವ್ಯಶ್ರೀ ತೃತೀಯ ಬಹುಮಾನ ಪಡೆದರು. ಜಾನಪದ ಗೀತೆ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ಶಿವಲೀಲಾ ತೃತೀಯ ಬಹುಮಾನ ಗಳಿಸಿದರು.

ದೇಶಭಕ್ತಿ ಗೀತೆಗಳ ಸಮೂಹ ಗಾಯನ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ಶಿವಲೀಲಾ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಸಹನ ಹಾಗೂ ತೃತೀಯ ಬಿಕಾಂ ವಿದ್ಯಾರ್ಥಿನಿ ವೈಷ್ಣವಿ ಅವರ ತಂಡ ತೃತೀಯ ಬಹುಮಾನವನ್ನು ಪಡೆದುಕೊಂಡಿತು.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನ, ಸಾಂಸ್ಕೃತಿಕ ಸಂಘದ ಸಂಚಾಲಕಿ ಆಶಾ, ಐಕ್ಯೂಏಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ ಅಭಿನಂದನೆ ಸಲ್ಲಿಸಿದ್ದಾರೆ. ಸಹ ಪ್ರಾಧ್ಯಾಪಕರಾದ ಯೋಗೇಶ್ ಡಿ. ಹೆಚ್, ರೇಖಾ ಎಸ್. ಎನ್, ಸಹಾಯಕ ಪ್ರಾಧ್ಯಾಪಕ ಪುರುಷೋತ್ತಮ ಉಪಸ್ಥಿತರಿದ್ದರು.