ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗವು ಅಂತಿಮ ವಿಭಾಗದ ವಿದ್ಯಾರ್ಥಿಗಳಿಗೆ ಸಂಶೋಧನಾ ಕೌಶಲ್ಯಗಳ ಕುರಿತು ಒಂದು ದಿನದ ಕಾರ್ಯಗಾರ ಹಮ್ಮಿಕೊಂಡಿತು.
ಸಂತ ಆಲೋಷಿಯಸ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪಿ. ವಿ. ಸುಮಿತಾ ಆಚಾರ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪ್ರೀತಿ ಕೀರ್ತಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಡಾ. ದಿನಕರ ಕೆಂಜೂರು, ಡಾ. ರಮ್ಯ ಕೆ. ಆರ್, ವೈಶಾಲಿ ಕೆ. ಮತ್ತು ಸಿ. ಲಹರಿ ಹಾಜರಿದ್ದರು.
ಮೋಕ್ಷಿತ ಎಂ. ತಂಡದವರು ಪ್ರಾರ್ಥಿಸಿದರು. ಪಲ್ಲವಿ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರೇಷ್ಮಾ ಎ. ಧನ್ಯವಾದಗೈದರು.

