ಮಂಗಳೂರು : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಬಳಿ ಮುಂಜಾನೆ ಸಂಭವಿಸಿದೆ.ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ತೀವ್ರತೆಯಿಂದ ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಉರುಳಿಬಿದ್ದಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ತಕ್ಷಣ ಸಾರ್ವಜನಿಕರು ಧಾವಿಸಿ ಕಾರನ್ನು ಸರಿಯಾಗಿ ತಿರುಗಿಸಿ ನಿಲ್ಲಿಸಲು ಸಹಾಯ ಮಾಡಿದರು. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

