ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕೆಂದು ಈ ಬಗ್ಗೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಇದನ್ನು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದು ಐವನ್ ಡಿಸೋಜಾ ಮನವಿ ಸ್ವೀಕರಿಸಿ ತಿಳಿಸಿದರು. ದ.ಕ. ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕೆಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸಿ, ಈ ಜಿಲ್ಲೆಯ ಹೆಸರನ್ನು ಘೋಷಣೆ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿಗಳನ್ನು ಇದಕ್ಕೆ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯರವರು ಆಶ್ವಾಸನೆ ನೀಡಿದ್ದು, ಐವನ್ ಡಿʼಸೋಜಾ ತಿಳಿಸಿದ್ದಾರೆ.
ಕರ್ನಾಟಕ ದ.ಕ. ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮಾಡಬೇಕೆಂದು ಅನೇಕ ಸಂಘಟನೆಗಳು ಪ್ರಯತ್ನಗಳು ನಡೆಸುತ್ತಿದ್ದು ಈ ಬಗ್ಗೆ ವಿಚಾರ ವಿನಿಮಯ ನಡೆಸುತ್ತಿದ್ದು ಸ್ಪಷ್ಟ ವಿಚಾರವಾಗಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಘೋಷಣೆ ಮಾಡುವುದರ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗುವುದು. ಐವನ್ ಡಿʼಸೋಜಾ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದಯಾನಂದ ಕತ್ತಲ್‌ಸಾರ್, ಅಕ್ಷತಾ ಸುವರ್ಣ, ಭರತ್ ಬಳ್ಳಾಲ್‌ಬಾಗ್, ಪ್ರೇಮ್ ಬಳ್ಳಾಲ್ ಬಾಗ್ , ರೋಷನ್ ರೋನಾಲ್ಡ್, ಉದಯ ಅಚಾರ್ಯ, ಗೀತಾ, ಲಕ್ಷೀಶ ಮುಂತಾದವರು ಉಪಸ್ಥಿತರಿದ್ದರು.

