ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಸುಮಾರು 70000 ಜನಸಂಖ್ಯೆಯನ್ನು ಹೊಂದಿರುವ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷ್ ಸರಕಾರ ಹಾಗೂ ನಂತರ ಭಾರತ ಸರಕಾರದಿಂದ ಪರಿಶಿಷ್ಟ ಜಾತಿ ಎಂದು ಗುರುತಿಸಲ್ಪಟ್ಟಿದ್ದ ಕುಡುಬಿ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ದ.ಕ.
ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ ಹಕ್ಕೋತಾಯ ಜಾತಾ ನ.5 ಮಂಗಳವಾರ ಮುಂಜಾನೆ 10:30ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಹಕ್ಕೊತ್ತಾಯ ಜಾಥ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಾಕರಕ್ಕೆ ಬೇಡಿಕೆ ಸಲ್ಲಿಸಲಿದ್ದಾರೆ. ಈ ಹಕ್ಕೋತಾಯ ಜಾಥವನ್ನು ಯಶಸ್ವಿ ಗೊಳಿಸಬೇಕಾಗಿ ಸಮಾಜ ಬಾಂದವರಲ್ಲಿ ವಿನಂತಿಸಿದ್ದಾರೆ. ಕುಡುಬಿ ಸಮುದಾಯದ ಜಾನಪದ ಕಲೆಯಾದ ಗುಮ್ಮಟೆ, ಕೋಲಾಟ ತಂಡಗಳೊಂದಿಗೆ ದ.ಕ. ಜಿಲ್ಲೆಯ ಕುಡುಬಿ ಸಮುದಾಯದವರು ಈ ಜಾಥಾದಲ್ಲಿ ಭಾಗವಹಿಸಲಿದ್ದಾರೆ.