ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

0
329

ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆದಿದ್ದು ಅದರಂತೆ ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬ ವಾಸವಾಗಿದೆ ಅದರಂತೆ ಗುರುವಾರ 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ಅವರಿಗೆ ಸಂಬಂದಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here