ಮಂಗಳೂರು: ಅರೆಕಾಲಿಕ ಸ್ವಯಂ ಸೇವಕರಿಗೆ (ನ್ಯಾಯ ಮಿತ್ರರು) ತರಬೇತಿ ಕಾರ್ಯಾಗಾರ ಉದ್ಘಾಟನೆ

0
13


♦️ ಮಂದಾರ ರಾಜೇಶ್ ಭಟ್

​ ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವಕೀಲರ ಸಂಘ (ರಿ) ಹಾಗೂ ಡೀಡ್ಸ್ ಸಂಸ್ಥೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು, ಮೂಡಬಿದರೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ಅರೆಕಾಲಿಕ ಸ್ವಯಂ ಸೇವಕರಿಗೆ (ನ್ಯಾಯ ಮಿತ್ರರು) ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಇಂದು ಯಶಸ್ವಿಯಾಗಿ ಜರುಗಿತು.


​ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಬಸವರಾಜ ಅವರು ಉದ್ಘಾಟಿಸಿದರು.

​ನ್ಯಾಯಾಂಗದ ಪ್ರಮುಖರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಜೈಬುನ್ನಿಸ್ಸಾ ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಹೆಚ್.ವಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

​ಈ ಸಂದರ್ಭದಲ್ಲಿ ಮಂಗಳೂರಿನ ಎಲ್ಲಾ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು ಹಾಗೂ ಡೀಡ್ಸ್ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಮರ್ಲಿನ್ ಮಾರ್ಟಿಸ್ ಅವರು ಉಪಸ್ಥಿತರಿದ್ದರು.

​ಕಾರ್ಯಾಗಾರದ ಉದ್ದೇಶ

ವಿವಿಧ ತಾಲೂಕುಗಳಿಂದ ಬಂದಿದ್ದ ಅರೆಕಾಲಿಕ ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ಜನಸಾಮಾನ್ಯರಿಗೆ ನ್ಯಾಯಾಂಗ ವ್ಯವಸ್ಥೆಯ ಸೌಲಭ್ಯಗಳನ್ನು ತಲುಪಿಸುವ ಕುರಿತು ಈ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು. ಸಾರ್ವಜನಿಕರು ಕಾನೂನು ನೆರವಿಗಾಗಿ 15100 ಎಂಬ ಉಚಿತ ಸಹಾಯವಾಣಿ ಸಂಖ್ಯೆಯನ್ನು ಬಳಸಿಕೊಳ್ಳಬಹುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

LEAVE A REPLY

Please enter your comment!
Please enter your name here