ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರಿನ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಾನ್ಸ್ ಸ್ಟೇಬಲ್ ಚಂದ್ರನಾಯಕ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳೆಯೋರ್ವರು ಚಂದ್ರನಾಯಕ್ ನನ್ನನ್ನು ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದರು. ಪ್ರಕರಣದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

