ಬಂಟ್ವಾಳ: ರಾಜ್ಯ ಸಕರ್ಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ಯಶಸ್ವಿಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಇಲ್ಲಿನ ಮಣಿನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ವಿಲೇವಾರಿ ಶಿಬಿರದಲ್ಲಿ ಅವರು ಮಾತನಾಡಿದರು. ಮಣಿನಾಲ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಕಾರ್ಯಕ್ರಮ ಉದ್ಘಾಟಿಸಿದರು.
ಬಂಟ್ವಾಳ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮಾತನಾಡಿ, ‘ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯು ಪ್ರತೀ ವಲಯ ಮಟ್ಟದಲ್ಲಿ ಶಿಬಿರಗಳನ್ನು ನಡೆಸಿ ಅರ್ಹರಿಗೆ ಯೋಜನೆ ಪ್ರಯೋಜನ ದೊರಕಿಸಿ ಕೊಡುವಲ್ಲಿ ಶ್ರಮಿಸುತ್ತಿದೆ ಎಂದರು. ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಬೂಡ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲುಗುತ್ತು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಗ್ರಾ.ಪಂ.ಉಪಾಧ್ಯಕ್ಷ ಶಿವಪ್ಪ ಪೂಜಾರಿ ಹಟದಡ್ಕ, ಪುರಸಭಾ ನಾಮ ನಿದರ್ೇಶಿತ ಸದಸ್ಯ ಜಗದೀಶ ಕುಂದರ್, ಅನುಷ್ಠಾನ ಸಮಿತಿ ಸದಸ್ಯರಾದ ಐಡಾ ಸುರೇಶ್, ಚಂದ್ರಶೇಖರ ಆಚಾರ್ಯ, ಸುಧೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್, ಸತೀಶ್, ಮುರಳೀಧರ ಪೈ, ವಿನಯ್ ಕುಮಾರ್, ಕಾಂಚಲಾಕ್ಷಿ, ಹರ್ಷನ್ ಬಿ., ಪವಿತ್ರಾ ಕೆ. ಅಬ್ದುಲ್ ಮಜೀದ್, ಜನಾರ್ದನ, ಕೃಷ್ಣಪ್ಪ ಪೂಜಾರಿ, ಅಬ್ದುಲ್ ಕರೀಂ, ನಾರಾಯಣ ನಾಯ್ಕ್, ಗ್ರಾ.ಪಂ. ಸದಸ್ಯರಾದ ವಿನ್ಸೆಂಟ್, ಪ್ರೆಸಿಲ್ಲಾ, ಯೋಗೀಶ್ ಶೆಟ್ಟಿ, ಪ್ರೇಮಾ, ಬಾಲಕೃಷ್ಣ ಪೂಜಾರಿ, ಶಾಂತಪ್ಪ ಪೂಜಾರಿ, ಕುಸುಮಾ, ದಯಾನಂದ ನಾಯ್ಕ, ಗೀತಾ, ಪ್ರಮುಖರಾದ ಮಲ್ಲಿಕಾ ಶೆಟ್ಟಿ, ಲವಿನಾ ಮೊರಾಸ್ ಮತ್ತಿತರರು ಇದ್ದರು. ಪಿಡಿಒ ಸಿಲ್ವಿಯಾ ಫೆನಾರ್ಂಡಿಸ್ ಸ್ವಾಗತಿಸಿದರು. ಗ್ರಾ.ಪಂ.ಸದಸ್ಯ ಫಾರೂಕ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.