ಮಣಿಪಾಲ : ಯುವಕ ಆತ್ಮಹತ್ಯೆ

0
34

ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಕ್ಯಾಂಪಸ್‌ನ ಕಾರು ಪಾರ್ಕಿಂಗ್ ಶೆಡ್‌ನಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬಸವರಾಜ (25) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದ್ದು, ಜೈಲು ಶಿಕ್ಷೆಯ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೈಲಿಗೆ ತೆರಳಿದ್ದ ವಿಚಾರದಿಂದ ಮನನೊಂದಿದ್ದ ಬಸವರಾಜ ಇತ್ತೀಚಿನ ದಿನಗಳಲ್ಲಿ ತೀವ್ರ ಮಾನಸಿಕ ಒತ್ತಡದಲ್ಲಿದ್ದ ಹಾಗೂ ವಿಪರೀತ ಮದ್ಯಪಾನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದೇ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಮಣಿಪಾಲ ಕೆಎಂಸಿ ಕ್ಯಾಂಪಸ್‌ನ ಕಾರು ಪಾರ್ಕಿಂಗ್ ಶೆಡ್‌ನ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here