ಮಾ.7 : ಪತ್ರಕರ್ತರ ಸಂಘ, ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

0
22

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ, ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025-28ನೇ ಸಾಲಿನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭವನ್ನು ಮಾ.7ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ನೂತನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಭಾಗವಹಿಸಲಿರುವರು.

ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಗೌರವ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಎಲ್ಲ ನೂತನ ಪದಾಧಿಕಾರಿಗಳನ್ನು ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು. ಸಾಧಕ ಪತ್ರಕರ್ತರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here