spot_img
29.6 C
Udupi
Wednesday, June 7, 2023
spot_img
spot_img
spot_img

ಮಾ. 26: ತುಳು ನರ್ತನ ಭಜನ ಸ್ಪರ್ಧೆ

ಪತ್ರಿಕಾಭವನ: ತುಳು ಕೂಟ ಕುಡ್ಲದ ಸುವರ್ಣ ಮಹೋತ್ಸವದ ಅಂಗವಾಗಿ ಮಾ. 26ರಂದು ಬೆಳಗ್ಗೆ 9.30ಕ್ಕೆ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ತುಳು ನರ್ತನ ಭಜನ ಸ್ಪರ್ಧೆ ನಡೆಯಲಿದೆ ಎಂದು ತುಳು ಕೂಟ ಕುಡ್ಲದ ಅಧ್ಯಕ್ಷ ಬಿ. ದಾಮೋದರ ನಿಸರ್ಗ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಬಹುಮಾನವಾಗಿ 7 ಸಾವಿರ ರೂ.ವನ್ನು ದ್ವಿತೀಯ ಬಹುಮಾನವಾಗಿ 5 ಸಾವಿರ ರೂ. ವನ್ನು ವಿಜೇತರಿಗಾಗಿ ನೀಡಲಾಗುತ್ತದೆ, ಭಜನ ಕಾರ್ಯಕ್ರಮವನ್ನು ಅಖಿಲ ಭಾರತ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಉದ್ಘಾಟಿ ಸಲಿದ್ದಾರೆ. ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು, ಶ್ರೀ ಕ್ಷೇತ್ರ ಮಂಗಳಾದೇವಿ ಮೊತ್ತೇಸರ ಪಿ. ರಮಾನಾಥ ಹೆಗ್ಡೆ ಭಾಗವಹಿಸಲಿದ್ದಾರೆ ಎಂದರು. ಕೂಟದ ಉಪಾಧ್ಯಕ್ಷ ಜೆ.ವಿ. ಶೆಟ್ಟಿ ಪ್ರದಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಕೋಶಾಧಿಕಾರಿ ಸಂಜೀವ ಅಡ್ಯಾರ್‌, ಗೌರವ ಸಲಹೆಗಾರ ಚಂದ್ರಶೇಖರ ಸುವರ್ಣ ಉಪಸ್ಥಿತರಿದ್ದರು.

Related Articles

Stay Connected

0FansLike
3,804FollowersFollow
0SubscribersSubscribe
- Advertisement -

Latest Articles