ಮಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರನ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದಾಗ ಚಿನ್ನಯ್ಯನ ಮೊಬೈಲ್ ತಿಮರೋಡಿ ಮನೆಯಲ್ಲಿ ಪತ್ತೆಯಾಗಿದೆ.

