ಕುಂದಾಪುರ : 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್, ಶ್ರೀ ಭಾರತಿ ಎಣ್ಣೆ ತಾಳೆ ಬೆಳೆಗಾರರ ಸಹಕಾರಿ ಸಂಘ (ನಿ.) ಮತ್ತು ತೋಟಗಾರಿಕೆ ಇಲಾಖೆ ಕುಂದಾಪುರ ಇವರ ಸಹಯೋಗದೊಂದಿಗೆ “ತಾಳೆ ಬೆಳೆ ಪ್ರದೇಶ ವಿಸ್ತರಣೆ ಮಹಾ ಆಂದೋಲನ ಮತ್ತು ರೈತರಿಗೆ ತಾಳೆ ಬೆಳೆ ಕುರಿತು ತರಬೇತಿ ಕಾರ್ಯಕ್ರಮ”ವು ಕುಂದಾಪುರ ತಾಲೂಕಿನ ತಳಂಜಿ ಗ್ರಾಮದ ರೈತರು ಒಬ್ಬರ ತಾಳೆ ತೋಟದಲ್ಲಿ ದಿನಾಂಕ 31-08-2026 ನೇ ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಆಯೋಜಿಸಲಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು ಮತ್ತು ಉಡುಪಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜೊತೆಗೆ, ಸಂಬಂಧಿತ ಸಂಸ್ಥೆಯ ಸಂಶೋಧನೆ ಮತ್ತು ಅಭಿವೃದ್ಧಿ ವ್ಯವಸ್ಥಾಪಕರು ಹಾಗೂ ತೋಟಗಾರಿಕೆ ಇಲಾಖೆಯ ನಿವೃತ್ತ ಉಪನಿರ್ದೇಶಕರು ಹಾಗೂ ಪ್ರಮುಖ ತಾಳೆ ಬೆಳೆಗಾರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ರೈತರಿಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ.
-ಮಂದಾರ ರಾಜೇಶ್

