Monday, May 19, 2025
Homeರಾಜಕೀಯಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ

ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ

ಬೈಂದೂರು : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಎಸ್.ಟಿ ಮೋರ್ಚಾದ ಬೃಹತ್ ಸಮಾವೇಶ ಸೋಮವಾರ ಫಾರ್ಮ್ ಹೌಸ್ ಗುಡ್ಡೆಯಂಗಡಿ ತಗ್ಗರ್ಸೆಯಲ್ಲಿ ನಡೆಯಿತು.

ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ಶೃತಿ, ಎಸ್ ಟಿ ಮೋರ್ಚಾದ ಬೃಹತ್ ಸಮಾವೇಶ ಉದ್ಘಾಟಿಸಿ,‌ ಮಾತನಾಡಿ, ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬೈಂದೂರು ಚುನಾವಣೆಯ ಪ್ರಭಾರಿ ಅಶೋಕ್ ಮೂರ್ತಿ, ಬಿಜೆಪಿ ಮುಖಂಡ ಕೃಷ್ಣಪ್ರಸಾದ್ ಅಡ್ಯಂತಾಯ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಅನಿತಾ ಆರ್.ಕೆ, ಎಸ್ ಟಿ ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ , ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ ಗೋಳಿಹೊಳೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ, ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಶ್ಯಾಮಲಾ ಕುಂದರ್, ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ಗೆದ್ದೆ

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸ್ವಾಗತಿಸಿದರು, ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular