ಸಜೀಪ ಮಾಗಣೆ ಶ್ರೀ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಸಾಮೂಹಿಕ ದೀಪಾರಾಧನೆ ಆರಂಭ

0
39

ಬಂಟ್ವಾಳ : ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಕಾಳಾದ್ರಿ ಸಾನಿಧ್ಯ ಬಿಲ್ಲಂ ಪದವು ಸಜೀಪ ಮಾಗಣೆ ಶ್ರೀ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಸಾಮೂಹಿಕ ದೀಪಾರಾಧನೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡಿತು.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿದವು. ಕಾರ್ತಿಕ ಮಾಸದ ಪಾವಿತ್ರ್ಯವನ್ನು ಸಾರುವ ಈ ಸಾಮೂಹಿಕ ದೀಪಾರಾಧನೆಯಲ್ಲಿ ಭಕ್ತರು ಪಾಲ್ಗೊಂಡು ದೀಪ ಬೆಳಗಿಸಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಜೀಪನಡು ಶ್ರೀ ಷಣ್ಮುಖ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂ ವೆಂಕಟೇಶ್ವರ ಭಟ್, ಜಿ. ರಾಮಕೃಷ್ಣ ಭಟ್, ಗಣಪತಿ ಮಹಾಬಲೇಶ್ವರ ಭಟ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ. ರಾಧಾಕೃಷ್ಣ ಆಳ್ವ, ಬಿಜಂದಾರ್ ಗುತ್ತು ಶಿವರಾಮ ಭಂಡಾರಿ, ಕಿಶನ್ ಸೇಣವ, ಸುಧಾಕರ ಕೆ.ಟಿ. ಮತ್ತಿತರರು ಉಪಸ್ಥಿತರಿದ್ದರು.

ಕಾರ್ತಿಕ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ನಡೆಯಲಿರುವ ಸಾಮೂಹಿಕ ದೀಪಾರಾಧನೆಗೆ ಭಕ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.