ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ವಿವಾಹ ಮೇ 1ರಂದು ಸಂಜೆ 6:45ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ. 52ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಈಗಾಗಲೇ 123 ಜೊತೆ ವಧು-ವರರು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಮೇ 1ರಂದು ಬೆಳಿಗ್ಗೆಯಿಂದಲೇ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ವಧು-ವರರಿಗೆ ಸೀರೆ, ರವಿಕೆ ಕಣ, ಧೋತಿ ಮತ್ತು ಶಾಲು ವಿತರಿಸುವರು.
ಸಂಜೆ 5 ಗಂಟೆಗೆ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಪ್ರದಕ್ಷಣೆ ಬಂದು ಅಮೃತವರ್ಷಿಣಿ ಸಭಾ ಭವನಕ್ಕೆ ತೆರಳುವರು. ಅಲ್ಲಿ ಅವರವರ ಸಂಪ್ರದಾಯದಂತೆ ಒಂದೇ ಮುಹೂರ್ತದಲ್ಲಿ ವಿವಾಹ ನಡೆಯುವುದು. ಸಿನೆಮಾ ನಟ ದೊಡ್ಡಣ್ಣ ಮತ್ತಿತರ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ವರದಕ್ಷಿಣೆ ಹಾಗೂ ದುಂದುವೆಚ್ಚ ತಡೆಯಲು ಧರ್ಮಸ್ಥಳದಲ್ಲಿ 1972ರಿಂದ ುಚಿತ ಸಾಮೂಹಿಕ ವಿವಾಹ ನಡೆಯುತ್ತಿದೆ. ಕಳೆದ ವರ್ಷದ ವರೆಗೆ 12,777 ವಿವಾಹಗಳು ನಡೆದಿವೆ.