ಕಾಶ್ಮೀರದ ಪಹಲ್ಗಾಮ್ ನಲ್ಲಿ ದೇಶದ ಪ್ರವಾಸಿ ನಾಗರಿಕರ ಮೇಲೆ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಕೈಗೊಂಡಿರುವ ‘ಆಪರೇಷನ್ ಸಿಂಧೂರ’. ಭಾರತೀಯ ಸೈನ್ಯ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಸಂಪೂರ್ಣವಾಗಿ ನಾಶ ಮಾಡಿದೆ . “ಆಪರೇಶನ್ ಸಿಂಧೂರ” ಮತ್ತು ನಂತರದ ಸೇನಾ ಯೋಜನೆಗಳಿಗೆ ಒಳ್ಳೆಯದಾಗಲಿ ಎಂಬ ಪ್ರಾರ್ಥನೆಯೊಂದಿಗೆ, ಸೈನಿಕರ ಶೌರ್ಯ-ಪರಾಕ್ರಮಕ್ಕೆ ವಿಜಯವಾಗಲೆಂದು ಪ್ರಾರ್ಥಿಸುತ್ತ, ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಶೃಂಗೇರಿ ಶಂಕರಮಠದಲ್ಲಿ “ಸಾಮೂಹಿಕ ಪೂಜೆ” ಸಲ್ಲಿಸಿದ್ದಾರೆ
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀಕಾಂತ್ ಪೈ, ನಗರ ಮಂಡಲ ಅಧ್ಯಕ್ಷರಾದ ಶ್ರೀ ಪುಷ್ಪರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ನರೇಂದ್ರ, ರಾಜ್ಯ ಎಸ್ ಸಿ ಮೋರ್ಚಾ ಕಾರ್ಯದರ್ಶಿ ಶ್ರೀ ಸೀತಾರಾಮ ಭರಣ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶ್ರೀ ಸಂತೋಷ್ ಕೋಟ್ಯಾನ್, ಒಬಿಸಿ ಮೋರ್ಚಾ ನಗರ ಅಧ್ಯಕ್ಷ ಶ್ರೀ ಸಿ ಟಿ ಜಯವರ್ಧನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ರಾದ ಶ್ರೀಮತಿ ಜಸಂತ ಅನಿಲ್ ಕುಮಾರ್, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀಜೀವನ್ ರಂಗನಾಥ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ಸಚಿನ್ ಗೌಡ, ಹಾಗೂ ಜಿಲ್ಲಾ, ನಗರ, ವಿವಿಧ ಮೋರ್ಚಾಗಳ, ಹಾಗೂ ಮಹಿಳಾ ಪದಾಧಿಕಾರಿಗಳು, ಹಿಂದೂ ಸಂಘಟನೆ ಪ್ರಮುಖರು ಉಪಸ್ಥಿತರಿದ್ದರು.