ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ವ್ರತ ಕಥಾ ಪೂಜೆ

0
24

ಸಜೀಪ: ಇಲ್ಲಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆಯ ಪುಣ್ಯಕಾಲದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥಾ ಪೂಜೆಯು ಅನ್ನದಾನದೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಭಕ್ತರು ಸಾಮೂಹಿಕವಾಗಿ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾದರು. ಪೂಜೆಯ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಟ್ರಸ್ಟ್ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಸುಧಾಕರ ಕೆ.ಟಿ., ಕಿಶನ್ ಸೇಣವ, ಸುಭಾಷ್ ಶೆಟ್ಟಿ, ರಾಮ ಬರೆ, ಸೋಮನಾಥ ಭಂಡಾರಿ, ದೇವದಾಸ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.