ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆ

0
1

ಸಜೀಪಮೂಡ : ವೃಶ್ಚಿಕ ಸಂಕ್ರಮಣದ ಪುಣ್ಯ ಸಂದರ್ಭದಲ್ಲಿ ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ಪೂಜೆಯು ಧಾರ್ಮಿಕ ಶ್ರದ್ಧಾಭಕ್ತಿಯಿಂದ ನೆರವೇರಿತು.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಸಾಮೂಹಿಕವಾಗಿ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು.

ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು, ಲಿಂಗಪ್ಪ ದೋಟ, ಕುಶೇಷ, ಪುರಂದರ, ಜಯಪ್ರಕಾಶ್ ಪೆರ್ವ, ಪ್ರಶಾಂತ್ ಕುಮಾರ್ ಸೇರಿದಂತೆ ಆಡಳಿತ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.