ಬದ್ಯಾರು-ಶಿರ್ಲಾಲಿನಲ್ಲಿ ಆ.28ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ

0
21

ಶಿರ್ಲಾಲು : ಬದ್ಯಾರು-ಶಿರ್ಲಾಲಿನ ಶ್ರೀ ಲೋಕನಾಥೇಶ್ವರ ದೇವಸ್ಥಾನ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಕಾರ್ಯಕ್ರಮವನ್ನು ಆ.28ರಂದು ಆಯೋಜಿಸಲಾಗಿದೆ.

ಆ.28ರ ಶುಕ್ರವಾರ ಬೆಳಗ್ಗೆ 10.30ರಿಂದ ಶ್ರೀ ಲೋಕನಾಥೇಶ್ವರ ದೇವಸ್ಥಾನ, ಬದ್ಯಾರು-ಶಿರ್ಲಾಲಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನೆರವೇರಲಿದ್ದು, ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತದ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಲೋಕನಾಥೇಶ್ವರ ದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಪೂಜೆ ಮಾಡಿಸುವವರು ₹200, ಒಂದು ಸೇರು ಬೆಳ್ತಿಗೆ ಅಕ್ಕಿ, ಎರಡು ತೆಂಗಿನಕಾಯಿ, ವೀಳ್ಯದೆಲೆ, ಅಡಿಕೆ, ಲೋಟ, ಚಮಚ, 10 ತುಂಡು ಬಾಳೆ ಎಲೆ, ಬಿಳಿ ಹೂ ಹಾಗೂ ಹಿಂಗಾರ ತರಬೇಕೆಂದು ಸೂಚಿಸಲಾಗಿದೆ.

ಪೂಜೆ ಮಾಡಿಸುವವರು ಕಮಲಾಕ್ಷಿ ಎಸ್.ಎನ್. ರಾವ್, ವಿಜಯ, ಚಂದ್ರಾವತಿ ಹಾಗೂ ಗಾಯತ್ರಿ ಅವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.

ಕಾರ್ಯಕ್ರಮಕ್ಕೆ ಭಕ್ತರು ತನು-ಮನ-ಧನಗಳಿಂದ ಸಹಕರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸುವಂತೆ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಸದಸ್ಯರು, ಭಜನಾ ಮಂಡಳಿ ಮತ್ತು ಶ್ರೀ ದೇವಿ ಮಹಿಳಾ ಕೇಂದ್ರದ ಪದಾಧಿಕಾರಿಗಳು ವಿನಂತಿಸಿದ್ದಾರೆ.