ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಹೆಜಮಾಡಿಯಲ್ಲಿ ಬೃಹತ್ ಭಾರತ್ ಜೋಡೋ ರ‍್ಯಾಲಿ

0
14

ಸಮಾಜವು ಮಾದಕ ವ್ಯಸನ ಮುಕ್ತ ರಾಷ್ಟ್ರವಾಗಬೇಕು : ವಿನಯ್‌ ಕುಮಾರ್‌ ಸೊರಕೆ

ಹೆಜಮಾಡಿ : ಮಾದಕ ವ್ಯಸನದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂದೇಶ ಸಾರುವ ಉದ್ದೇಶದಿಂದ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಅ.2ರಂದು ಬೃಹತ್ ಭಾರತ್ ಜೋಡೋ ರ‍್ಯಾಲಿ ನಡೆಯಿತು.

ಕಾಪುವಿನ ರಾಜೀವ್ ಭವನದಿಂದ ಆರಂಭಗೊಂಡ ಬೈಕ್ ರ‍್ಯಾಲಿ ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದ ಬಳಿ ಸಮಾರೋಪಗೊಂಡಿತು. ರ‍್ಯಾಲಿಗೆ ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, “ಸಮಾಜವು ಮಾದಕ ವ್ಯಸನ ಮುಕ್ತ ರಾಷ್ಟ್ರವಾಗಬೇಕು. ಈ ಕುರಿತು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ. ಭಾರತ್ ಜೋಡೋ ರ‍್ಯಾಲಿಯ ಮೂಲಕ ಸಮಾಜವನ್ನು ಒಗ್ಗೂಡಿಸುವ ಸಂದೇಶವನ್ನು ನೀಡಲಾಗುತ್ತಿದೆ” ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, “ಮಾದಕ ವ್ಯಸನ ಮುಕ್ತ ಭಾರತದೊಂದಿಗೆ ಬಿಜೆಪಿ ಮುಕ್ತ ಭಾರತ” ಎಂಬ ಸಂದೇಶವನ್ನು ನೀಡಿದರು.

ರ‍್ಯಾಲಿಯಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ. ಸುಕುಮಾರ್, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಬೋಧ್ ಚಂದ್ರ ಹೆಜಮಾಡಿ, ಉಪಾಧ್ಯಕ್ಷ ದಿವಾಕರ್ ಶೆಟ್ಟಿ ಕಾಪು, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಝ್ ಹುಸೈನ್, ಕಾಪು ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಶಿವಾಜಿ ಎಸ್. ಸುವರ್ಣ, ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸರ್ಫುದ್ದೀನ್ ಶೇಕ್, ಕಾಪು ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಅಶೋಕ್ ಸಾಲಿಯನ್, ಸುನಿಲ್ ಡಿ. ಬಂಗೇರ, ಗಣೇಶ್ ಕೋಟ್ಯಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸುಧೀರ್ ಕರ್ಕೇರ, ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶಾಲ್ ವಿ. ಬಂಗೇರ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.