ಪರ್ಯಾಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಫ್ಯಾನ್ ಲೋಕಾರ್ಪಣೆ

0
5

ಉಡುಪಿ: ಪರ್ಯಾಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಕರ ಅನುಕೂಲಕ್ಕಾಗಿ ಅಳವಡಿಸಲಾದ ಬೃಹತ್ ಫ್ಯಾನ್ ಅನ್ನು ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ರಾಜಾಂಗಣದಲ್ಲಿ ನಿರಂತರವಾಗಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತರು ಮತ್ತು ವೀಕ್ಷಕರಿಗೆ ಅನುಕೂಲವಾಗುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ವೇದವರ್ಧನತೀರ್ಥರು, ಶಾಂತಲಾ ಎಲೆಕ್ಟ್ರಿಕಲ್ ಸಂಸ್ಥೆಯವರು ನೀಡಿದ ಈ ಕೊಡುಗೆ ನಿಜವಾದ ಅರ್ಥದಲ್ಲಿ ಸಾರ್ಥಕ ಸೇವೆಯಾಗಿದೆ. ಭಕ್ತರ ಅನುಕೂಲಕ್ಕಾಗಿ ಮಾಡಿರುವ ಈ ವ್ಯವಸ್ಥೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಂತಲಾ ಎಲೆಕ್ಟ್ರಿಕಲ್ ಸಂಸ್ಥೆಯ ಮುಖ್ಯಸ್ಥರು, ಶ್ರೀಮಠದ ದಿವಾನರು ಹಾಗೂ ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.