ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಫ್ಯಾನ್ ಲೋಕಾರ್ಪಣೆ: ಭಕ್ತರು, ಪ್ರೇಕ್ಷಕರ ಅನುಕೂಲಕ್ಕೆ ವಿಶೇಷ ವ್ಯವಸ್ಥೆ

0
4

ಉಡುಪಿ: ಪರ್ಯಾಯ ಶ್ರೀಕೃಷ್ಣ ಮಠದ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಅಳವಡಿಸಲಾದ ಬೃಹತ್ ಫ್ಯಾನ್‌ನ್ನು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ರಾಜಾಂಗಣದಲ್ಲಿ ನಿರಂತರವಾಗಿ ನಡೆಯುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಆಗಮಿಸುವ ಭಕ್ತರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ.

ಉಡುಪಿಯ ಶಾಂತ ಎಲೆಕ್ಟ್ರಿಕಲ್ಸ್ ಸಂಸ್ಥೆಯ ವತಿಯಿಂದ ಈ ಕೊಡುಗೆಯನ್ನು ನೀಡಲಾಗಿದ್ದು, ಇದು ನಿಜವಾದ ಅರ್ಥದಲ್ಲಿ ಸಾರ್ಥಕ ಸೇವೆಯಾಗಿದೆ ಎಂದು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮಠದ ದಿವಾನರು, ಶಾಂತ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀಪತಿ ಭಟ್ ಉಚ್ಚಿಲ, ಶ್ರೀಧರ್ ಭಟ್ ಉಚ್ಚಿಲ ಹಾಗೂ ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಭಕ್ತರು ಹಾಗೂ ಕಾರ್ಯಕ್ರಮಗಳ ವೀಕ್ಷಕರ ಅನುಕೂಲಕ್ಕಾಗಿ ಸಂಸ್ಥೆಯು ನೀಡಿದ ಈ ಕೊಡುಗೆಗೆ ಮೆಚ್ಚುಗೆ ವ್ಯಕ್ತವಾಗಿದೆ.