ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದಿಂದ ರಾಜ್ಯಾದ್ಯಂತ ಸೃಷ್ಟಿಯಾಗಿರುವ ‘ಲ್ಯಾಂಡ್ ಜಿಹಾದ್’ ಅವಾಂತರವನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ‘ಬೃಹತ್ ಪ್ರತಿಭಟನಾ ರ್ಯಾಲಿ’ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ರಾಜ್ಯ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ನಡೆಸಿ ವಿಜಯಪುರ, ಹುಬ್ಬಳ್ಳಿ ಸಹಿತ ಅನೇಕ ಜಿಲ್ಲೆಗಳಲ್ಲಿ ಹಲವಾರು ಮಠ ಮಂದಿರ, ದೇವಸ್ಥಾನಗಳು ಸೇರಿದಂತೆ ರೈತರ ಸ್ವಂತ ಜಮೀನನ್ನು ವಶಪಡಿಸಿಕೊಳ್ಳುವ ಹುನ್ನಾರದೊಂದಿಗೆ ಪಹಣಿ ಪತ್ರಗಳಲ್ಲಿ ಅನಧಿಕೃತವಾಗಿ ವಕ್ಫ್ ಹೆಸರನ್ನು ದಾಖಲಿಸಿ, ನೋಟಿಸ್ ನೀಡಿರುವ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ನೂರಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ಮಠ ಮಂದಿರ, ದೇವಸ್ಥಾನಗಳ ಸಹಿತ ತಲೆ ತಲಾಂತರದಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ರೈತರು ಮತ್ತು ಸಾರ್ವಜನಿಕರ ಸ್ಥಿರಾಸ್ತಿಗಳ ಬಗ್ಗೆ ನೀಡಿದ ನೋಟಿಸನ್ನು ಸರಕಾರ ತಕ್ಷಣ ಹಿಂಪಡೆಯಬೇಕು ಹಾಗೂ ಪಹಣಿ ಪತ್ರಗಳಲ್ಲಿ ಅನಧಿಕೃತವಾಗಿ ನಮೂದಿಸಲ್ಪಟ್ಟಿರುವ ವಕ್ಫ್ ಹೆಸರನ್ನು ಕೂಡಲೇ ತಿದ್ದುಪಡಿ ಮಾಡಿ ರದ್ದುಗೊಳಿಸಬೇಕು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅನಪೇಕ್ಷಿತ ಕಾನೂನು ಬಾಹೀರ ಘಟನೆಗಳು ನಡೆಯದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ 1974ರಲ್ಲಿ ಹೊರಡಿಸಲಾಗಿರುವ ಗಜೆಟ್ ನೋಟಿಫಿಕೇಶನ್ ಅನ್ನು ಕೂಡಾ ಸರಕಾರ ಹಿಂಪಡೆದು ರದ್ದುಗೊಳಿಸಬೇಕು ಎಂದು ಅಗ್ರಹಿಸಿದರು.
ಪ್ರತಿಭಟನೆಗೆ ತಡೆಯೊಡ್ದುವ ಆರಕ್ಷಕರ ಸಹಿತ ಯಾವುದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಪಹಣಿ ಪತ್ರಗಳಲ್ಲಿ ವಕ್ಫ್ ಹೆಸರು ನಮೂದಾಗಿರಬಹುದೆoಬ ಆತಂಕ ಎಲ್ಲರನ್ನೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನ.7 ಮತ್ತು 8ರಂದು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರೈತ ಬಂಧುಗಳ ಜೊತೆ ಸೇರಿ ತಾಲೂಕು ಕಛೇರಿಗೆ ತೆರಳಿ ಪಹಣಿ ಪತ್ರ ಪರಿಶೀಲನೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಹಿಂದೂ ಸಮಾಜಕ್ಕೆ ತನ್ನ ಅಸ್ಮಿತೆ, ಹಿತಾಸಕ್ತಿಯನ್ನು ಕಾಯ್ದುಕೊಳ್ಳುವ ಜೊತೆಗೆ ಸ್ಟಿರಾಸ್ತಿಯನ್ನು ಕಾಪಾಡಿಕೊಳ್ಳುವ ಶಕ್ತಿ ಇದೆ. ಜಿಲ್ಲೆಯಲ್ಲಿ ಒಂದು ಇಂಚು ಭೂಮಿಯನ್ನೂ ವಕ್ಫ್ ಬೋರ್ಡ್ ಗೆ ಕಬಳಿಸಲು ಅವಕಾಶ ನೀಡುವುದಿಲ್ಲ. ಇದು ಕೇವಲ ಬಿಜೆಪಿಯ ಹೋರಾಟವಾಗಿರದೆ ಸಾರ್ವಜನಿಕರ ಹೋರಾಟವಾಗಿದೆ. ಒಂದೇ ಕೋಮಿನ ಅತಿಯಾದ ಒಲೈಕೆಯಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಹಿಂದೂ ಶಕ್ತಿಯ ಅಗಾಧತೆಯ ಅರಿವಾಗಲಿದೆ. ಈ ನಿಟ್ಟಿನಲ್ಲಿ ಹಿಂದೂ ಸಮಾಜ ಒಗ್ಗಟ್ಟಾಗಿ ರಾಜ್ಯ ಸರಕಾರದ ಹಿಂದೂ ವಿರೋಧಿ ಷಡ್ಯಂತ್ರವನ್ನು ಎದುರಿಸಬೇಕು ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ನಕಲಿ ಗ್ಯಾರಂಟಿಗಳ ಅವಾಂತರ, ಬ್ರಹ್ಮಾಂಡ ಭ್ರಷ್ಟಾಚಾರ, ಹಗರಣಗಳ ಸರಮಾಲೆಯನ್ನು ಎಳೆ ಎಳೆಯಾಗಿ ಬಿಡಿಸಿ, ಮುಡಾ ಹಗರಣದ ಮುಜುಗರ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದ್ ಷಡ್ಯಂತ್ರವನ್ನು ರಚಿಸಿದ್ದು, ತಾನು ಹೆಣೆದ ಬಲೆಯಲ್ಲಿ ತಾನೇ ಸಿಲುಕಿಕೊಂಡಿದ್ದು, ಇದರ ವ್ಯತಿರಿಕ್ತ ಪರಿಣಾಮವನ್ನು ಅನುಭವಿಸಲಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವ ಮೂಲಕ ರಾಜ್ಯಪಾಲರಿಗೆ ನೀಡುವ ಅಹವಾಲನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಜಿಲ್ಲಾಧ್ಯಕ್ಷರುಗಳಾದ ಮಟ್ಟಾರ್ ರತ್ನಾಕರ ಹೆಗ್ದೆ, ತಿಂಗಳೆ ವಿಕ್ರಮಾರ್ಜುನ ಹೆಗ್ದೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಗ್ರಾಮಾಂತರ ಅಧ್ಯಕ್ಷ ರಾಜೀವ ಕುಲಾಲ್, ಪ್ರಮುಖರಾದ ರಾಜೇಶ್ ಕಾವೇರಿ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್, ಗೀತಾoಜಲಿ ಎಮ್. ಸುವರ್ಣ, ವಿಜಯ ಕುಮಾರ್ ಉದ್ಯಾವರ, ಶ್ರೀನಿಧಿ ಹೆಗ್ದೆ, ಗಿರೀಶ್ ಎಮ್. ಅಂಚನ್, ಸಂಧ್ಯಾ ರಮೇಶ್, ಪ್ರಥ್ವಿರಾಜ್ ಶೆಟ್ಟಿ, ವಿಜಯ ಕೊಡವೂರು, ವಿಜಯ ಕೊಡವೂರು, ರುಡಾಲ್ಫ್ ಡಿಸೋಜ, ಶ್ಯಾಮಲಾ ಎಸ್. ಕುಂದರ್, ವೀಣಾ ಎಸ್. ಶೆಟ್ಟಿ, ನಳಿನಿ ಪ್ರದೀಪ್ ರಾವ್, ದಿಲೇಶ್ ಶೆಟ್ಟಿ, ಶಂಕರ ಅಂಕದಕಟ್ಟೆ, ಶಶಾಂಕ್ ಶಿವತ್ತಾಯ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಸಚಿನ್ ಪೂಜಾರಿ, ಜಿತೇಂದ್ರ ಶೆಟ್ಟಿ, ಗೋಪಾಲಕೃಷ್ಣ ರಾವ್ ಮಟ್ಟು, ರಾಘವೇಂದ್ರ ಉಪ್ಪುರು, ಶ್ರೀಕಾಂತ್ ಪ್ರಭು, ಸದಾನಂದ ಪ್ರಭು, ಸುಮಿತ್ರಾ ನಾಯಕ್, ನೀತಾ ಪ್ರಭು, ಶ್ರೀವತ್ಸ, ನಿತಿನ್ ಪೈ, ದೇನಿಸ್ ಮಸ್ಕರೇನಸ್, ಹರೀಶ್ ಶೆಟ್ಟಿ ಚೇರ್ಕಾಡಿ, ವೀಣಾ ನಾಯ್ಕ್, ರಮ್ಯಾ ರಾವ್ ಸಹಿತ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.