ದಕ್ಷಿಣ ಕನ್ನಡ : ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾಮಗಾರಿ ವಿರೋಧಿ ನಡವಳಿಕೆಯನ್ನು ಖಂಡಿಸುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳು ಸಮಸ್ಯೆಯನ್ನು ಬಗೆಹರಿಸಲು, ಮತ್ತು ಶೀಘ್ರ ಅನುಷ್ಠಾನಕ್ಕಾಗಿ ಮಂಗಳೂರಿನಲ್ಲಿ ಬ್ರಹತ್ ಪ್ರತಿಭಟನಾ ಧರಣಿ ನಡೆಯಲಿದೆ. ಆಯೋಜಿಸಲಾದ ಈ ಪ್ರತಿಭಟನೆಗೆ ಸಾರ್ವಜನಿಕರ ಬೆಂಬಲ ಕೋರಲಾಗಿದೆ.
ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸೆಪ್ಟೆಂಬರ್ 16, ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಧರಣಿ ಪ್ರತಿಭಟನೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಅಭಿವೃದ್ಧಿ ವಿರೋಧಿ ನಿರ್ಧಾರಗಳು ಮತ್ತು ಜನತೆಗೆ ತೊಂದರೆ ಉಂಟುಮಾಡುವ ಆಡಳಿತ ಶೈಲಿಯನ್ನು ವಿರೋಧಿಸಿ ಧ್ವನಿ ಎತ್ತಲಾಗುತ್ತದೆ.
ಪ್ರತಿಭಟನೆಯ ಮೂಲಕ ರೈತರು, ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸಾಮಾನ್ಯ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವನ್ನು ಒತ್ತಾಯ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು, ರಾಜ್ಯದ ಜನರ ಧ್ವನಿಯಾಗಿ ಈ ಪ್ರತಿಭಟನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಬೇಕು” ಎಂದು ಕೋರಿದ್ದಾರೆ. ಸಾರ್ವಜನಿಕರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.
ವರದಿ: ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ

